ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸುವ ಸಂದೇಶದೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ತನ್ನ 14ನೇ ಬಜೆಟ್ ನ್ನು ಜನಪರವಾದ ಎಲ್ಲಾ ಇಲಾಖೆಗಳ ಸರ್ವತೋಮುಖ ಅಭಿವೃದ್ಧಿಯ ಹಿತದೃಷ್ಟಿಯಿಂದ ಮಂಡಿಸುವ ಜೊತೆಗೆ ಕಾಂಗ್ರೆಸ್ಸಿನ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣ ವಿನಿಯೋಗಿಸುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಭಿತುಪಡೆಸಿದೆ.