Media
ವಿದ್ಯಾರ್ಥಿಗಳ ಹಿತದೃಷ್ಟಿಯೇ ನಮ್ಮ ಮುಖ್ಯ ಧ್ಯೇಯ!
ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿತದೃಷ್ಟಿಯಿಂದ NEP ಕುರಿತಂತೆ ಶಿಕ್ಷಣ ತಜ್ಞರೊಂದಿಗೆ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯೇ ನಮ್ಮ ಮುಖ್ಯ ಧ್ಯೇಯ!
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ VK ಎಜುಕೇಷನ್ FAIRಗೆ ಚಾಲನೆ
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ VK ಎಜುಕೇಷನ್ FAIRಗೆ ಚಾಲನೆ ನೀಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಉನ್ನತ ಶಿಕ್ಷಣದ ಮುಂದಿನ ಆಯ್ಕೆಗಳ ಕುರಿತು ಪೋಷಕರಲ್ಲಿನ ಸಂದೇಹ, ಗೊಂದಲಗಳ ನಿವಾರಣೆಗೆ ಈ ಎಜುಕೇಷನ್ ಮೇಳ ಸಹಕಾರಿಯಾಗೆವ, ಆಯೋಜಕರ ಕಾರ್ಯವನ್ನು ಶ್ಲಾಘಿಸಿ, ಉಜ್ವಲ ಭವಿಷ್ಯಕ್ಕೆ ಶುಭ ಕೋರಿದೆ.
ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಾನೂ ಸಹ ಯೋಗ ಮಾಡಿ ದೈನಂದಿನ ಜೀವನದಲ್ಲ ಯೋಗದಿಂದ ಆಗುವ ಉಪಯೋಗಗಳು ಹಾಗೂ ಆರೋಗ್ಯಕರ ವಾತಾವರಣ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು.
ಚಿಂತಾಮಣಿ ನಗರದ ಮಾಳಪಲ್ಲಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನ.
ಚಿಂತಾಮಣಿ ನಗರದ ಮಾಳಪಲ್ಲಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿ ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಿದೆ.
ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ
ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷದ ಧೋರಣೆ ವಿರುದ್ಧ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಅವರು, ಮಾಜಿ ಸಚಿವರಾದ ಶಿವಶಂಕರ್ ರೆಡ್ಡಿ ಅವರು, ಶಾಸಕರಾದ ಪ್ರದೀಪ್ ಈಶ್ವರ್ ಅವರು ಸೇರಿದಂತೆ ಹಿರಿಯ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.