News & Events
ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥರಾದ ಪಿ ಜಿ ಆರ್ ಸಿಂಧ್ಯಾ ಹಾಗೂ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವರು ಡಾ. ಎಂಸಿ ಸುಧಾಕರ್ ಸಮಾಲೋಚನೆ
ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥರಾದ ಪಿ ಜಿ ಆರ್ ಸಿಂಧ್ಯಾ ಹಾಗೂ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವರು ಡಾ. ಎಂಸಿ ಸುಧಾಕರ್ ಸಮಾಲೋಚನೆ ನಡೆಸಿದರು ಈ ಸಂದರ್ಭದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಗೆ ಸರ್ಕಾರದಿಂದ ಬೇಕಾದ ಅನುಕೂಲಗಳ ಬಗ್ಗೆ ಪ್ರಸ್ತಾಪಿಸಲಾಯಿತು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಭರವಸೆ ನೀಡಿದರು.
ನೆಕ್ಕುಂದಿ ಹಾಗೂ ಗೊಪಸಂದ್ರ ಕೆರೆಯ ಸ್ಥಿತಿ ಅವೈಜ್ಞಾನಿಕ
ಚಿಂತಾಮಣಿ ಕ್ಷೇತ್ರದ ಅತಿ ಹೆಚ್ಚು ನೀರಿನ ಸಂಗ್ರಹ ಸಾಮರ್ಥ್ಯದ ಕೆರೆಗಳು ನೆಕ್ಕುಂದಿ ಹಾಗೂ ಗೊಪಸಂದ್ರ ಕೆರೆಯ ಸ್ಥಿತಿ ಅವೈಜ್ಞಾನಿಕ ಅಸಮರ್ಪಕ ನಿರ್ವಹಣೆಯಿಂದ ಶೋಚನೀಯವಾಗಿದ್ದು, ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ತೆರಳಿ ಮಾಹಿತಿ ಪಡೆದು ಮಳೆಗಾಲದ ಮುಂಚಿತವಾಗಿ ದುರಸ್ತಿ ಕಾರ್ಯ ಕೈಗೊಂಡು ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿತದೃಷ್ಟಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲಕಾರಿ ವಾತಾವರಣ ನಿರ್ಮಾಣ ಮಾಡುತ್ತಿದ್ದ NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತಜ್ಞರಿಂದ ಸಲಹೆ ಪಡೆದಿದ್ದು , ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಭರವಸೆಯಂತೆ ಜಾರಿಗೆ ಬರಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿತದೃಷ್ಟಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲಕಾರಿ ವಾತಾವರಣ ನಿರ್ಮಾಣ ಮಾಡುತ್ತಿದ್ದ NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತಜ್ಞರಿಂದ ಸಲಹೆ ಪಡೆದಿದ್ದು ,ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಭರವಸೆಯಂತೆ ಜಾರಿಗೆ ಬರಲಿದೆ. pic.twitter.com/IUx00WD0J7 —
ಚಿಂತಾಮಣಿ ನಗರದ ಝಾನ್ಸಿ ಕ್ರೀಡಾಂಗಣ
ಚಿಂತಾಮಣಿ ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಸರಿಯಾಗಿ ನಿರ್ವಹಣೆ ಮಾಡದೆ ಪಾಳು ಬಿದ್ದಿರುವ ವ್ಯಾಯಾಮ ಉಪರಣಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಸದುಪಯೋಗ ಆಗುವಂತೆ ತಕ್ಕ ರೀತಿಯಲ್ಲಿ ಉತ್ತಮ ವ್ಯಾಯಾಮಶಾಲೆಯನ್ನು ಸ್ಥಾಪಿಸಲು ಸೂಚಿಸಲಾಯಿತು.
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ಗೃಹಕ್ಕೆ ಬೇಟಿ
ಕೃಷಿ ಹೊಂಡದಲ್ಲಿ ಬಿದ್ದ ಮಗನನ್ನು ಕಾಪಾಡಲು ಹೋದ ತಂದೆ ಹಾಗೂ ತಾತ ಇಬ್ಬರೂ ಸಾವನ್ನಪ್ಪಿದ ದುರ್ವಿಧಿ ಘಟನೆ ಚಿಂತಾಮಣಿಯ ಅಂಕಾಲಮಡುಗು ಗ್ರಾಮದಲ್ಲಿ ನಡೆದಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ಗೃಹಕ್ಕೆ ಬೇಟಿ ನೀಡಿದ್ದು.
*ಉಸಿರಿಗೆ ಹಸಿರು – ಹಸಿರಿಗೆ ಸಸಿಗಳು*
ವನಮಹೋತ್ಸವ ಆಚರಣೆಯ ಅಂಗವಾಗಿ ಚಿಂತಾಮಣಿಯಲ್ಲಿ ಇಂದು ಹಮ್ಮಿಕೊಂಡಿದ್ದ “ಹಸಿರು ಚಿಂತಾಮಣಿ” ಯೋಜನೆಗೆ ಚಾಲನೆ ನೀಡಲಾಯಿತು. ಕಾಡುಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಸಿಗಳನ್ನು ನೆಟ್ಟು, ಹಸಿರು ಕಾಪಾಡಲು ಹಾಗೂ ತ್ಯಾಜ್ಯ ಮುಕ್ತ ಮಾಡುವಲ್ಲಿ ಎಲ್ಲರೂ ಭಾಗಿಯಾಗಿ ಅರಿವು ಮೂಡಿಸುವ ನಿಟ್ಟನಲ್ಲಿ ಪ್ರತಿಜ್ಞೆ ಮಾಡಲಾಯಿತು.
ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ
ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಅಂಗವಾಗಿ ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಗಣ್ಯರ ಜೊತೆ ಪುತ್ಥಳಿಗೆ ಪುಷ್ಪಮಾಲೆ ಸಮರ್ಪಿಸಿ,ಜಿಲ್ಲೆಯ ಪ್ರಗತಿಪರ ರೈತರಿಗೆ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೊಡುವುದು ವಿಳಂಬ
ಕೇಂದ್ರ ಸರ್ಕಾರದ ದುರುದ್ದೇಶದಿಂದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೊಡುವುದು ವಿಳಂಬವಾದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ನೇರವಾಗಿ ಜನರಿಗೆ 5 ಕೆಜಿ ಅಕ್ಕಿ ಬದಲು 1ಕೆಜಿ ಗೆ 34 ರೂಗಳಂತೆ 170 ರೂ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯೇ ನಮ್ಮ ಮುಖ್ಯ ಧ್ಯೇಯ!
ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿತದೃಷ್ಟಿಯಿಂದ NEP ಕುರಿತಂತೆ ಶಿಕ್ಷಣ ತಜ್ಞರೊಂದಿಗೆ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯೇ ನಮ್ಮ ಮುಖ್ಯ ಧ್ಯೇಯ!
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ VK ಎಜುಕೇಷನ್ FAIRಗೆ ಚಾಲನೆ
ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ VK ಎಜುಕೇಷನ್ FAIRಗೆ ಚಾಲನೆ ನೀಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಉನ್ನತ ಶಿಕ್ಷಣದ ಮುಂದಿನ ಆಯ್ಕೆಗಳ ಕುರಿತು ಪೋಷಕರಲ್ಲಿನ ಸಂದೇಹ, ಗೊಂದಲಗಳ ನಿವಾರಣೆಗೆ ಈ ಎಜುಕೇಷನ್ ಮೇಳ ಸಹಕಾರಿಯಾಗೆವ, ಆಯೋಜಕರ ಕಾರ್ಯವನ್ನು ಶ್ಲಾಘಿಸಿ, ಉಜ್ವಲ ಭವಿಷ್ಯಕ್ಕೆ ಶುಭ ಕೋರಿದೆ.