News & Events
ಬ್ರಿಟಿಷ್ ಕೌನ್ಸಿಲ್ ಆಯೋಜಿಸಿರುವ ಸಂಶೋದನಾ ಸ್ಪರ್ದೆ
ಬ್ರಿಟನ್ನಿನ ಸ್ಕಾಟ್ಲ್ಯಾಂಡಿನ ಡಂಡಿ ಯೂನಿವರ್ಸಿಟಿ ಹಾಗೂ ಉನ್ನತ ಶಿಕ್ಷಣ ಪರಿಷತ್ ಹಾಗೂ ಬ್ರಿಟಿಷ್ ಕೌನ್ಸಿಲ್ ಆಯೋಜಿಸಿರುವ ಸಂಶೋದನಾ ಸ್ಪರ್ದೆಯಲ್ಲಿ ಭಾಗಿಯಾಗುತ್ತಿರುವ ಗುಲ್ಬರ್ಗ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಮ್ಮ ವಿದ್ಯಾರ್ಥಿಗಳ ತಂಡಕ್ಕೆ ಶುಭ ಕೋರಿ ಸಿದ್ಧತೆಗಳ ಪರಿಶೀಲಿಸಿದೆ.
Dr. Babasaheb Ambedkar School of Economics, a unitary university of Karnataka Government
Visited Dr. Babasaheb Ambedkar School of Economics, a unitary university of Karnataka Government and discussed various current issues with Vice Chancellor Dr NR Bhanu Murthy and other senior faculty.
ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಾನೂ ಸಹ ಯೋಗ ಮಾಡಿ ದೈನಂದಿನ ಜೀವನದಲ್ಲ ಯೋಗದಿಂದ ಆಗುವ ಉಪಯೋಗಗಳು ಹಾಗೂ ಆರೋಗ್ಯಕರ ವಾತಾವರಣ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು.
ಚಿಂತಾಮಣಿ ನಗರದ ಮಾಳಪಲ್ಲಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನ.
ಚಿಂತಾಮಣಿ ನಗರದ ಮಾಳಪಲ್ಲಿಯ ಗೃಹ ಕಚೇರಿಯಲ್ಲಿ ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿ ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಿದೆ.
ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ
ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷದ ಧೋರಣೆ ವಿರುದ್ಧ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಅವರು, ಮಾಜಿ ಸಚಿವರಾದ ಶಿವಶಂಕರ್ ರೆಡ್ಡಿ ಅವರು, ಶಾಸಕರಾದ ಪ್ರದೀಪ್ ಈಶ್ವರ್ ಅವರು ಸೇರಿದಂತೆ ಹಿರಿಯ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.